ಬೆಂಗಳೂರಿನ ವಾಹನ ಸವಾರರಿಗೆ ಗುಣಮಟ್ಟದ ರಸ್ತೆ ಕಲ್ಪಿಸಲು ಸಾಧ್ಯವಾಗದ ಬಿಜೆಪಿಯ 40% ಸರ್ಕಾರವು ಈಗ ನೂತನ ಪಾರ್ಕಿಂಗ್ ನೀತಿ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ಮುಂದಾಗಿರುವುದು ಖಂಡನೀಯ ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ ಹೇಳಿದರು.ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋಹನ್ ದಾಸರಿ, ಭಾನುವಾರವು ರಜಾ ದಿನವಾಗಿದ್ದರೂ ಕೂಡ ಸೆಪ್ಟೆಂಬರ್ 18ರ ಭಾನುವಾರದಂದು ಟೆಂಡರ್ಗೆ ಆಹ್ವಾನ ಕರೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.