ಕೊಪ್ಪಳ : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಡಿ.25ರಂದು ಹೊಸ ಪಕ್ಷ ಘೋಷಣೆ ಮಾಡುವ ಸಾಧ್ಯತೆ ಇದೆ.ಈ ಬಗ್ಗೆ ಸುಳಿವು ನೀಡಿರುವ ಅವರು, ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮುಂದಿನ ವಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.ಡಿ.25ರಂದು ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿ ಕರೆದಿದ್ದಾರೆ. ಒಂದು ವಾರದ ವಿಶ್ರಾಂತಿ ಬಳಿಕ ಮತ್ತೆ ಓಡಾಟ ಶುರು ಮಾಡಿರುವ ರೆಡ್ಡಿ, ತಮ್ಮ ಪ್ರವಾಸದ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.ಡಿ.18 ರಂದು ಗಂಗಾವತಿಯಲ್ಲಿ ಸುದ್ದಿಗೋಷ್ಠಿ