ಸಾರ್ವಜನಿಕರಿಗೆ ಹತ್ತಿರವಾದ ಸಾರಿಗೆ ಇಲಾಖೆ ನಷ್ಟ ಅನುಭವಿಸಿದರೂ, ಸಾರ್ವಜನಿಕ ಸೇವೆಗಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ವಾಹನವನ್ನು ಓಡಿಸಲಾಗುತ್ತಿದೆ. ಲಾಕ್ ಡೌನ್ ಸಂದರ್ಭದಲ್ಲಿ ಉಂಟಾದ ನಷ್ಟವನ್ನು ಸರಿದೂಗಿಸಲು ಮುಂದಿನ ದಿನಗಳಲ್ಲಿ ಸಾರಿಗೆ ಇಲಾಖೆ ಹೊಸ ಯೋಜನೆಯೊಂದಿಗೆ ಬಸ್ ಸಂಚಾರ ನಡೆಸಲು ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.ಲಾಕ್ಡೌನ್ ಅವಧಿ ಮೇ 31 ರಂದು ಕೊನೆಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಬಸ್ ಸಂಚಾರ, ಪ್ರಯಾಣಿಕರ ಸಂಖ್ಯೆ ಕುರಿತಂತೆ ಕೇಂದ್ರ