ಬೆಂಗಳೂರು : ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದರೂ, ಅದರ ಸಮರ್ಪಕ ಬಳಕೆ ಆಗಿಲ್ಲ. ಪ್ರಕೃತಿ, ಪರಿಸರ ಮತ್ತು ಅರಣ್ಯ ನಾಶವಾಗದಂತೆ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಹೊಸ ನೀತಿ ತರುವ ಅಗತ್ಯವಿದೆ ಎಂದು ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದರು. ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಸಾಹಸ ಪ್ರವಾಸೋದ್ಯಮವನ್ನೂ