ಹೊಸ ವರ್ಷದ ಆಚರಣೆ ಸುಸೂತ್ರವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಎಲ್ಲ ಕಡೆಯೂ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯುವಕ-ಯುವತಿಯರು ಸೇರಿದಂತೆ ಒಂದು ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು. ಆದರೆ, ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ ಎಂದಿದ್ದಾರೆ. ಬಿಜೆಪಿಯವರು ಚುನಾವಣೆಗಾಗಿ ಹಿಂದು ಧರ್ಮ ರಾಜಕಾರಣ ಮಾಡುತ್ತಾರೆ ಎಂದು ಕೇಂದ್ರ ಸಚಿವ