ಪೋಷಕರ ವಿರೋಧದ ನಡುವೆಯೂ ಪ್ರೀತಿಸಿ ವಿವಾಹವಾಗಿದ್ದ ನವವಿವಾಹಿತೆ ವರ್ಷ ಕಳೆಯುವಷ್ಟರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದ ಅರುಣಾ ಹಾಗೂ ಕೊಂಡಪ್ಪ ದಂಪತಿ ಪುತ್ರಿ ಅನುಷಾ ಮೃತಪಟ್ಟಿದ್ದು, ಆಕೆಯ ಒಂದು ಕಿವಿ ಸಂಪೂರ್ಣ ಕತ್ತರಿಸಲಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಅನುಷಾ, ಕಳೆದ ವರ್ಷ ಚಿಕ್ಕಬಳ್ಳಾಪುರ ತಾಲೂಕಿನ ಕರಿಗಾನಪಾಳ್ಯ ಗ್ರಾಮದ ಅಭಿಲಾಷ್ನನ್ನು ಪ್ರೀತಿಸಿ ಮದುವೆಯಾಗಿದ್ದಳು.