9 ದಿನದ ಹಿಂದೆ ವಿವಾಹವಾಗಿದ್ದ ನವ ವಿವಾಹಿತೆಯೊಬ್ಬಳನ್ನು ವ್ಯಕ್ತಿಯೊಬ್ಬ ಅಪಹರಿಸಿರುವ ಕುರಿತು ಅಪಹರಣಕ್ಕೊಳಗಾದ ವಿವಾಹಿತಳ ಪತಿ ಇಲ್ಲಿನ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾರವಾರ ತಾಲೂಕಿನ ಬಾಡದ ನಿವಾಸಿ ಸಚಿನ್ ನಾಯ್ಕ ಎಂಬುವವರು ಜೂನ್ 28 ರಂದು ಅಂಕೋಲಾ ತಾಲೂಕಿನ ಅವರ್ಸಾದ ದಿವ್ಯಾ ನಾಯ್ಕ ಎಂಬ ಯುವತಿಯನ್ನು ವಿವಾಹವಾಗಿದ್ದರು.ವಿವಾಹದ ಬಳಿಕ ಅನ್ಯೋನ್ಯವಾಗಿದ್ದ ಈ ದಂಪತಿ ಜುಲೈ 2 ಮತ್ತು 3ಕ್ಕೆ ಗ್ರಾಮ ದೇವರು,ಕುಲ ದೇವರಿಗೆ ಪೂಜೆ ಸಲ್ಲಿಸಿ ಬಂದಿದ್ದರು.ಅದರ ಬಳಿಕ ಜುಲೈ