ರಾಜ್ಯದ ರೈತರ ಸಾಲ ನೀತಿ ಬದಲಾಯಿಸಬೇಕು, ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು ಒತ್ತಾಯಿಸಿ ನೃಪತುಂಗ ರೋಡ್ ನಲ್ಲಿರುವ ರಿಸರ್ವ್ ಬ್ಯಾಂಕ್ ಮುಂದೆ ರೈತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕುರುಬೂರು ಶಾಂತ ಕುಮಾರ್ 20 ದಿನಗಳ ಹಿಂದೆಯೇ ನಾವು ಬೆಂಗಳೂರು ಆರ್ ಬಿ ಐ