ಮುಂದಿನ ದಿನಗಳಲ್ಲಿ ತಮಿಳುನಾಡಿನ ನಾಯಕರೊಬ್ಬರನ್ನು ದೇಶದ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡುವ ಮೂಲಕ ಸಂಚಲನ ಮೂಡಿಸಿದ್ದಾರೆ. ತಮಿಳುನಾಡು ಪ್ರವಾಸ ಕೈಗೊಂಡಿರುವ ಅಮಿತ್ ಶಾ ರಾಜ್ಯ ಬಿಜೆಪಿಯ ಹಿರಿಯ ನಾಯಕರ ಜೊತೆ ಆಪ್ತ ಸಮಾಲೋಚನಾ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಭಾಗಿಯಾದ ಹಿರಿಯ ನಾಯಕರು ಅಮಿತ್ ಶಾ ಅವರ ಹೇಳಿಕೆಯ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ. ಮುಂಬರುವ ದಿನಗಳಲ್ಲಿ ತಮಿಳುನಾಡಿನ ವ್ಯಕ್ತಿ ಈ ದೇಶದ