ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಇಂದು ಸಂಸದೆ ಶೋಭಾ ಕರಂದ್ಲಾಜೆ ಮಾವುತರು, ಕಾವಾಡಿಗಳಿಗೆ ಔತಣ ಕೂಟ ಏರ್ಪಡಿಸಿದ್ದರು. ಆಯುಧ ಪೂಜೆ ಹಿನ್ನೆಲೆಯಲ್ಲಿ ದಸರಾ ಗಜಪಡೆಗೂ ಪೂಜೆ ಸಲ್ಲಿಸಲಾಯಿತು. ಅರಮನೆ ಆವರಣದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಅರಣ್ಯ ಅಧಿಕಾರಿಗಳು ಅರ್ಜುನ ನೇತೃತ್ವದ 15 ಆನೆಗಳಿಗೂ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು. ನಂತರ ಅರಮನೆ ಅಂಗಳದಲ್ಲಿ ಮಾವುತರಿಗೆ ಔತಣ ಕೂಟವಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅವಧಿಯಿಂದಲೂ ಶೋಭಾ ಕರಂದ್ಲಾಜೆ ಮಾವುತರು ಮತ್ತು ಕಾವಾಡಿಗಳಿಗೆ