ಕೇರಳದಲ್ಲಿ ಮಾರಣಾಂತಿಕ ನಿಪಾ ವೈರಸ್ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೇರಳ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲು ಹಾಗೂ ಜಿಲ್ಲಾ, ತಾಲೂಕು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ನಿಪಾ ವೈರಸ್ ಚಿಕಿತ್ಸೆಗೆ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೇರಳದ ಕಲ್ಲಿಕೋಟೆಯಲ್ಲಿ ಇಬ್ಬರಿಗೆ ನಿಪಾ ವೈರಸ್ ಸೋಂಕು ದೃಢಪಟ್ಟಿದೆ. ಏಳು ಕಂಟೈನ್ಮೆಂಟ್ ಸೃಷ್ಟಿಸಿ ಆ ವ್ಯಾಪ್ತಿಯ ಶಾಲೆ, ಕಾಲೇಜುಗಳನ್ನು ಮುಚ್ಚಲಾಗಿದೆ.