ರಾಜ್ಯಾದ್ಯಂತ ಕೋವಿಡ್ ಹಬ್ಬರ ಹೆಚ್ಚಾಗ್ತಿದೆ. ಹೀಗಾಗಿ ಕೋವಿಡ್ ಸೋಂಕು ಹೆಚ್ಚು ಉಲ್ಬಣವಾಗದಂತೆ ಈಗಾಗಲೇ ಕಡಿವಾಣ ಹಾಕಲು ಸರ್ಕಾರದಿಂದ ಎಲ್ಲಾ ರೀತಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ರಾಜ್ಯಾದ್ಯಂತ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ರಾಜ್ಯ ಸರಕಾರ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬೆಳಿಗ್ಗೆ 5ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಖರೀದಿಗೆ ಅವಕಾಶ ನೀಡಲಾಗಿದೆ. ಅಲ್ಲದೇ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಕರ್ಫ್ಯೂ