ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪುತ್ರ ನಟ ನಿಖಿಲ್ ಮತ್ತು ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ಜತೆಯಾಗಿ ಚುನಾವಣೆ ಪ್ರಚಾರಕ್ಕೆ ಧುಮುಕಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ನಟರಾಗಿರುವ ನಿಖಿಲ್ ಸ್ಟಾರ್ ಪ್ರಚಾರಕರಾಗಿ ರಾಜ್ಯದಾದ್ಯಂತ ಪ್ರಚಾರ ಮಾಡಲಿದ್ದಾರೆ. ಅವರೊಂದಿಗೆ ಪ್ರಜ್ವಲ್ ಕೂಡಾ ಸಾಥ್ ನೀಡಲಿದ್ದಾರೆ ಎಂದು ಜೆಡಿಎಸ್ ಮುಖಂಡರು ತಿಳಿಸಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರಿಗೆ ವಿಶ್ರಾಂತಿಯ ಅಗತ್ಯವಾಗಿರುವುದರಿಂದ ಅವರ ಸ್ಥಾನವನ್ನು ತುಂಬಲು ಅವರ ಪುತ್ರರಾದ ನಿಖಿಲ್ಗೆ ಚುನಾವಣೆ