ರಾಮನಗರ : ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯದ ಲೋಕಸಭೆ ಕ್ಷೇತ್ರದಿಂದಲೇ ಕಣಕ್ಕಿಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದರು. ತಮ್ಮ ಮತ್ತು ನಿಖಿಲ್ ವಿರುದ್ಧ ಕೆಲವರು ನೀಡುತ್ತಿರುವ ಹೇಳಿಕೆಗಳ ಬಗ್ಗೆ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ.ಕಳೆದ ಚುನಾವಣೆಯಲ್ಲಿ ನಮ್ಮ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು. ಕಾಂಗ್ರೆಸ್, ಬಿಜೆಪಿ, ರೈತಸಂಘ ಒಂದಾಗಿದ್ದರು