ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ಹಾಗೂ ನಿಖಿಲ್ ಕುಮಾರ್ ಅವರನ್ನು ರಾಜಕೀಯಕ್ಕೆ ತರಲು ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಹೀಗಾಗಿ ಜೆಡಿಎಸ್ ಮುಖಂಡರು ಹೊಸ ಪ್ಲಾನ್ ಮಾಡಿದ್ದು, ಜನರಿಗೆ ಉಚಿತ ಸಿನಿಮಾ ಟಿಕೆಟ್ ಕೊಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಸೀತಾರಾಮ ಕಲ್ಯಾಣ ಚಿತ್ರದ ಟಿಕೆಟ್ಗಳನ್ನು ಮಂಡ್ಯ ಕ್ಷೇತ್ರದಲ್ಲಿ ಉಚಿತವಾಗಿ ವಿತರಿಸಲಾಗಿದೆ ಎಂದು ತಿಳಿದು ಬಂದಿದೆ.ಸಿಎಂ ಕುಮಾರಸ್ವಾಮಿಯವರು ತಮ್ಮ ಪುತ್ರ ನಿಖಿಲ್ ಕುಮಾರ್ ಅವರನ್ನು ತಾವು ಅಧಿಕಾರದಲ್ಲಿದ್ದ ಸಂದರ್ಭದಲ್ಲೇ ರಾಜಕೀಯಕ್ಕೆ ಕರೆತರಬೇಕೆಂಬ