ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ವಿರುದ್ಧ ಸೋತ ಬಳಿಕ ನಿಖಿಲ್ ಕುಮಾರಸ್ವಾಮಿ ರಾಜಕೀಯವಾಗಿ ಮೇಲೇಳಲು ಇದೀಗ ಇನ್ನೊಂದು ಅವಕಾಶ ಸಿಕ್ಕಿದೆ.ಸ್ಪೀಕರ್ ರಮೇಶ್ ಕುಮಾರ್ ರಾಜೀನಾಮೆ ನೀಡಿದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಅನರ್ಹಗೊಳಿಸಿರುವುದರಿಂದ ಆ ಸ್ಥಾನಗಳಿಗೆ ಉಪಚುನಾವಣೆ ನಡೆಯಬಹುದು. ಹೀಗಾಗಿ ಹೊಸ ಅಭ್ಯರ್ಥಿಗಳನ್ನು ಈ ಸ್ಥಾನಗಳಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ಕಣಕ್ಕಿಳಿಸುವುದು ಖಚಿತ.ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸೋತಾಗ ನಿಖಿಲ್ ಕುಮಾರಸ್ವಾಮಿ ಮತ್ತೆ ಮಂಡ್ಯದಿಂದಲೇ ನನ್ನ ರಾಜಕೀಯ