ಮಂಡ್ಯ : ಸಿಎಂ ಕುಮಾರಸ್ವಾಮಿ ಬಳಿಕ ಇದೀಗ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಗದ್ದೆಗಿಳಿದು ನಾಟಿ ಮಾಡಿ ತಾನೂ ಕೂಡ ರೈತರ ಮಗ ಎಂದು ಸಾಬೀತು ಮಾಡಿದ್ದಾರೆ. ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕೀಳಿಯುತ್ತಿರುವ ನಿಖಿಲ್ ಕುಮಾರಸ್ವಾಮಿ ಮದ್ದೂರು ಭಾಗದಲ್ಲಿ ಇಂದು ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಪ್ರಚಾರ ಮಾಡುತ್ತಿದ್ದ ಪಕ್ಕದ ಗದ್ದೆಯಲ್ಲಿ ರೈತರು ಗದ್ದೆ ನಾಟಿ ಮಾಡುತ್ತಿದ್ದರು. ಇದನ್ನು ಗಮನಿಸಿದ ನಿಖಿಲ್ ತಾವೂ ಅವರೊಂದಿಗೆ