ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿರುವಂತೆ ಸಂಭಾವ್ಯ ಅಭ್ಯರ್ಥಿಗಳ ಲೆಕ್ಕಾಚಾರ ತಲೆಕೆಳಗೆ, ಮೇಲೆ ಆಗುತ್ತಿದೆ. ಸುಮಲತಾ ಸ್ಪರ್ಧೆ ಖಚಿತವಾಗಿರುವ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಕ್ಷೇತ್ರ ಬದಲಿಸಲಿದ್ದಾರೆ ಎನ್ನುವ ಚರ್ಚೆ ಶುರುವಾಗಿದೆ. ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಸ್ಪರ್ಧಿಸುವುದು ಖಚಿತವಾದ ಹಿನ್ನಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಮಂಡ್ಯ ಬಿಟ್ಟು ಮೈಸೂರಿನಿಂದ ಕಣಕ್ಕಿಳಿಸಲು ಚಿಂತನೆಗಳು ನಡೆಯುತ್ತಿವೆ. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಮೈತ್ರಿಯಾಗಲಿದ್ದು, ಹಾಸನ, ಮಂಡ್ಯ ಮೈಸೂರು ಸೇರಿದಂತೆ ಹಲವು ಕ್ಷೇತ್ರಗಳನ್ನು ಬಿಟ್ಟು ಕೊಡಲು