ಬೆಂಗಳೂರು : ಮಂಡ್ಯ ಕ್ಷೇತ್ರದ ಚುನಾವಣೆಗಾಗಿ ಮೈತ್ರಿಸರ್ಕಾರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬುಧವಾರ ಅಪಾರ ಅಭಿಮಾನಿಗಳೊಂದಿಗೆ ಸುಮಲತಾ ಅವರು ಭರ್ಜರಿಯಾಗಿ ನಾಮಿನೇಷನ್ ಮಾಡಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಇಂದು ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ . ಬೆಳಗ್ಗೆ 11 ಗಂಟೆಯಿಂದ 12 ಗಂಟೆಯೊಳಗೆ ನಿಖಿಲ್, ತಮ್ಮ ತಾತ, ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ. ಜ್ಯೋತಿಷಿಗಳ ಸಲಹೆಯಂತೆ ಸಮಯ ನಿಗದಿಪಡಿಸಲಾಗಿದೆ. ಗುರುವಾರ