ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ನಾಯಕರೊಳಗೆ ಎಲ್ಲವೂ ಸರಿಯಿಲ್ಲ ಎಂದು ಗುಸು ಗುಸು ನಡೆದಿರುವ ಹೊತ್ತಲ್ಲೇ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿಡಿಯೋ ಒಂದರ ಕುರಿತು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದ ನಿಖಿಲ್ ಕುಮಾರಸ್ವಾಮಿ ಇತ್ತೀಚೆಗಷ್ಟೇ ಮಂಡ್ಯದಲ್ಲೇ ಮನೆ ಮಾಡಿ ರಾಜಕೀಯ ಭವಿಷ್ಯ ಕಂಡುಕೊಳ್ಳುವುದಾಗಿ ಹೇಳಿದ್ದರು.ಅದರ ಬೆನ್ನಲ್ಲೇ ಇದೀಗ ತಮ್ಮ ಕಾರ್ಯಕರ್ತರಿಗೆ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ಬರಬಹುದು. ಅದು ಮುಂದಿನ ವರ್ಷ