ಮತ್ತೆ ನಿಖಿಲ್ ಎಲ್ಲಿದ್ದೀಯಪ್ಪ ಎಂದು ಟ್ರೋಲ್ ಆಗುತ್ತಿದ್ದಂತೆ ನಿಖಿಲ್ ದಿಢೀರ್ ಆಗಿ ಕಾಣಿಸಿಕೊಂಡಿದ್ದಾರೆ. ಮಂಡ್ಯದಲ್ಲಿಂದು ನಿಖಿಲ್ ಕುಮಾರಸ್ವಾಮಿ ಕಾಣಿಸಿಕೊಂಡಿದ್ದಾರೆ. ನಿಖಿಲ್ ಕುಮಾರಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿದ್ದಾರೆ.ಮಂಡ್ಯ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್ ಮನೆಯಲ್ಲಿ ಸುದ್ದಿಗೋಷ್ಟಿ ನಡೆಸಿದ್ರು. ಚುನಾವಣೆ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ರು.ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್, ಜಿಲ್ಲೆಯ ರಾಜಕೀಯ ವಿಷಯಗಳ ಕುರಿತು ಚರ್ಚೆ ನಡೆಸಿದ್ರು. ಚುನಾವಣೆ ಮುಗಿದ ಬಳಿಕ ನಾಪತ್ತೆಯಾಗಿದ್ದ ನಿಖಿಲ್.