ದಾವಣಗೆರೆ : ಕುರುಬ ಸಮುದಾಯದ ಎಸ್ ಟಿ ಮೀಸಲಾತಿ ಹೋರಾಟ ವಿಚಾರ ಇದರ ಹಿಂದೆ ಆರ್.ಎಸ್.ಎಸ್ ಕೈವಾಡವಿದೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹೋರಾಟದ ಹಿಂದೆ ಆರ್.ಎಸ್.ಎಸ್ ಕೈವಾಡವಿಲ್ಲ. ಸಿದ್ದರಾಮಯ್ಯ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಆರ್.ಎಸ್.ಎಸ್ ಜನರನ್ನು ಒಗ್ಗೂಡಿಸುವ ಕೆಲಸ ಮಾಡುತ್ತೆ ಎಂದು ಹೇಳಿದ್ದಾರೆ.ಅಲ್ಲದೇ ಅಸ್ತಿತ್ವ ಉಳಿಸಿಕೊಳ್ಳಲು ಸಿದ್ದು ಹೋರಾಟ ಮಾಡುತ್ತಿದ್ದಾರೆ.