ಕಾಂತಾರ ಸಿನಿಮಾ ವಿಶ್ವ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬಾಲಿವುಡ್ನಲ್ಲಂತೂ ಈ ಚಿತ್ರ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ನೋಡಿದ ಅನೇಕರು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಅವರ ನಟನೆ ಹಾಗೂ ನಿರ್ದೇಶನವನ್ನು ಎಲ್ಲರೂ ಹೊಗಳಿದ್ದಾರೆ. ಈಗ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸರದಿ. ನಿರ್ಮಲಾ ಅವರು ಕಾಂತಾರ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಸಿನಿಮಾ ಅದ್ಭುತವಾಗಿದೆ ಎಂದು ಹೊಗಳಿದ್ದಾರೆ. ಇದರಿಂದ ಕಾಂತಾರ ತಂಡ ಖುಷಿಯಾಗಿದೆ.