ಡಿ. 9ರ ನಂತರ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಇಲ್ಲ- ಹೆಚ್.ಡಿ.ದೇವೇಗೌಡ ಸ್ಪಷ್ಟನೆ

ಬೆಳಗಾವಿ, ಸೋಮವಾರ, 2 ಡಿಸೆಂಬರ್ 2019 (11:46 IST)

ಬೆಳಗಾವಿ : ಡಿ. 9ರ ನಂತರ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಇಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಸ್ಪಷ್ಟವಾಗಿ ಹೇಳಿದ್ದಾರೆ.


ಈ ಬಾರಿ ಉಪಚುನಾವಣೆಯಲ್ಲಿ ಬಿಜೆಪಿಗೆ ಅತಂತ್ರ ಪರಿಸ್ಥಿತಿ ಎದುರಾದರೆ ಕಾಂಗ್ರೆಸ್ –ಜೆಡಿಎಸ್ ಮತ್ತೆ ಮೈತ್ರಿ ಮಾಡಿಕೊಂಡು  ಸರ್ಕಾರ ರಚನೆ ಮಾಡುತ್ತಾರೆ ಎಂಬ ಮಾತು ಕೇಳಿಬಂದಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಕೂಡ ಒಲವು ತೋರಿಸಿದ್ದಾರೆ.


ಆದರೆ ಕಾಂಗ್ರೆಸ್ ಜೊತೆಗಿನ ಮೈತ್ರಿ ವಿಚಾರದ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಈಗಾಗಲೇ ಬಿಜೆಪಿ, ಕಾಂಗ್ರೆಸ್ ಜೊತೆ ಮೈತ್ರಿ  ಮಾಡಿಕೊಂಡು ಸಂಕಷ್ಟ ಅನುಭವಿಸಿದ್ದೇವೆ. ನಾವು ವಿರೋಧ ಪಕ್ಷದ ಸ್ಥಾನದಲ್ಲಿ ಕುತುಕೊಳ್ಳುತ್ತೇವೆ, ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.




ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕರ್ನಾಟಕದಲ್ಲೂ ಮಹಾರಾಷ್ಟ್ರ ಮಾದರಿ ಮೈತ್ರಿಗೆ ಯತ್ನ- ಕೆಸಿ ವೇಣುಗೋಪಾಲ್

ಬೆಳಗಾವಿ : ಉಪಚುನಾವಣೆಯ ನಂತರ ಕರ್ನಾಟಕದಲ್ಲೂ ಮಹಾರಾಷ್ಟ್ರ ಮಾದರಿ ಮೈತ್ರಿಗೆ ಯತ್ನಿಸಲಾಗುವುದು ಎಂದು ಕೆಸಿ ...

news

ಮತದಾರರಿಗೆ ಕಮಲ ಚಿಹ್ನೆಯ ಪರಿಚಯಿಸಲು ಡಾ. ಕೆ.ಸುಧಾಕರ್ ಹರಸಾಹಸ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ಹಿನ್ನಲೆ ಮತದಾರರಿಗೆ ಕಮಲ ಚಿಹ್ನೆ ...

news

ಅಥಣಿ, ಕಾಗವಾಡ ಕ್ಷೇತ್ರದಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪರಿಂದ ಅಬ್ಬರದ ಪ್ರಚಾರ

ಬೆಳಗಾವಿ : ಡಿಸೆಂಬರ್ 5 ರಂದು ಉಪಚುನಾವಣೆಯ ಹಿನ್ನಲೆಯಲ್ಲಿ ಇಂದು ಅಥಣಿ, ಕಾಗವಾಡ ಕ್ಷೇತ್ರದಲ್ಲಿಂದು ಸಿಎಂ ...

news

ನಿರ್ಭಯಾ ಅತ್ಯಾಚಾರಿಗೆ ಕ್ಷಮಾದಾನಕ್ಕೆ ವಿರೋಧ

ನವದೆಹಲಿ: ಪ್ರಿಯಾಂಕ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣದ ಬಿಸಿ ಹಬ್ಬಿರುವಾಗಲೇ 2012 ರಲ್ಲಿ ದೆಹಲಿಯಲ್ಲಿ ...