ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿಗೆ ಆಸಕ್ತಿ ಇಲ್ಲ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಫ್ರಾಕ್ಸಿ ಮತದಾನ ಮಾಡಿರುವ ಕಾಂಗ್ರೆಸ್ ನ ಎಂಟು ಶಾಸಕರ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದೇವೆ. ಒಂದೆರಡು ದಿನಗಳಲ್ಲಿ ಚುನಾವಣಾ ಆಯೋಗದ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಹಾಗಾದಲ್ಲಿ ಕಾಂಗ್ರೆಸ್ ಶಾಸಕರ ಸದಸ್ಯತ್ವ ರದ್ದಾಗುತ್ತದೆ. ಒಟ್ಟು ಸದಸ್ಯರ ಸಂಖ್ಯೆ