ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಶಾಸಕ ಎನ್ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ.ಇದರಿಂದಾಗಿ ಮೊಹಮ್ಮದ್ ನಲಪಾಡ್ ಗೆ ಜಾಮೀನು ನಿರಾಕರಣೆಯಾಗಿದೆ. ರೆಸ್ಟೋರೆಂಟ್ ನಲ್ಲಿ ಹಲ್ಲೆ ನಡೆಸಿದ್ದಲ್ಲದೆ, ಆಸ್ಪತ್ರೆಗೂ ತೆರಳಿ ಹಲ್ಲೆ ನಡೆಸಿದ್ದಕ್ಕೆ ನಲಪಾಡ್ ಗೆ ಜಾಮೀನು ನಿರಾಕರಿಸಲಾಗಿದೆ.ಅಲ್ಲದೆ, ಹಲ್ಲೆಗೊಳಗಾದ ವಿದ್ವತ್ ಸ್ಥಿತಿ ತೀರಾ ಗಂಭೀರವಾಗಿದ್ದರಿಂದ ಇದೊಂದು ಗಂಭೀರ ಪ್ರಕರಣ ಎಂದು ಪರಿಗಣಿಸಿದ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಹೀಗಾಗಿ