ರಾಯಣ್ಣ ಬ್ರಿಗೇಡ್ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮತ್ತೊಮ್ಮೆ ಸೆಡ್ಡು ಹೊಡೆದಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದ ರಾಯಣ್ಣ ಬ್ರಿಗೇಡ್ ಸಮಾವೇಶ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಣ್ಣ ಬ್ರಿಗೇಡ್ ಪಾಲಿಟಿಕಲ್ ಸಂಘಟನೆಯಲ್ಲ. ಹೀಗಾಗಿ ಬ್ರಿಗೇಡ್ ನಿಲ್ಲಿಸಿ ಎಂದು ಹೇಳಲು ರಾಜ್ಯ ಹಾಗೂ ಕೇಂದ್ರ ನಾಯಕರಿಗೆ ಅವಕಾಶ ಇಲ್ಲ. ಬ್ರಿಗೇಡ್ನಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ಡ್ಯಾಮೆಜ್ ಆಗಲ್ಲ ಎಂದು