ಹಾಸನ : ಮುಖ್ಯಮಂತ್ರಿ ಬದಲಾವಣೆಯಂಥ ವಿಚಾರವನ್ನು ಬೀದಿಲಿ ನಿತ್ಕೊಂಡು ಮಾತನಾಡಬಾರದು.ಚುನಾವಣೆ ದೃಷ್ಟಿಯಿಂದ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಸಚಿವ ಗೋಪಾಲಯ್ಯ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು.ರಾಷ್ಟ್ರದಲ್ಲಿ ದೊಡ್ಡ ಪಕ್ಷವಾದ ಬಿಜೆಪಿಯಲ್ಲಿ ವರಿಷ್ಠರಿದ್ದಾರೆ, ವರಿಷ್ಠರು ಹೇಳಿದ ಮಾತಿಗೆ ಗೌರವ ಕೊಡಬೇಕಾಗುತ್ತದೆ ಎಂದರು. ಮುಂದಿನ ವರ್ಷದಲ್ಲಿ ಚುನಾವಣೆ ಇದೆ. ಚುನಾವಣೆ ದೃಷ್ಟಿಯಿಂದ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಮುಂದಿನ ಚುನಾವಣೆಯ ನೇತೃತ್ವವನ್ನು ಬೊಮ್ಮಾಯಿ ಅವರೇ