ಸಚಿವ ಸಂಪುಟ ರಚನೆಯಲ್ಲಿ ಯಾವುದೇ ಗೊಂದಲವಿಲ್ಲ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸಲಿದೆ ಎಂದು ಗಂಜಿಗೆರೆ ಕೊಪ್ಪಲು ಗ್ರಾಮದಲ್ಲಿ ಜೆಡಿಎಸ್ ಶಾಸಕ ಎಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಗಂಜಿಗೆರೆ ಕೊಪ್ಪಲು ಗ್ರಾಮದಲ್ಲಿ ಮಾತನಾಡಿದ ಅವರು, ಎಚ್ಡಿಕೆ ಸರ್ಕಾರ ಜನಪರ ಆಡಳಿತ ನೀಡುತ್ತದೆ. ಕುಮಾರಸ್ವಾಮಿ ಕೊಟ್ಟ ಮಾತಿಗೆ ತಪ್ಪುವ ಡೋಂಗಿ ರಾಜಕಾರಣಿಯಲ್ಲ ಎಂದು ತಿರುಗೇಟು ನೀಡಿದ್ದಾರೆ. ರೈತರ ಸಾಲ ಮನ್ನಾ ಮಾಡುವುದು