ಬೆಂಗಳೂರು: ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಬಾರಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ಇರುವುದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು. ಭಾರತ ಬಿಟ್ಟು ತೊಲಗಿ ಚಳುವಳಿ ದಿನದ ಅಂಗವಾಗಿ ನಗರದ ಎಂ.ಜಿ. ರಸ್ತೆಯ ಮಹಾತ್ಮಗಾಂಧಿ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ಗೌರವ್ ಗುಪ್ತ ಮಾಲಾರ್ಪಣೆ