ಮುಂಬರುವ ವಿಧಾನಸಭೆ ಚುನಾವಣೆಗೆ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಒಳಒಪ್ಪಂದ ಮಾಡಿಕೊಂಡಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಂದೂ ಒಳ ಒಪ್ಪಂದದ ರಾಜಕಾರಣ ಮಾಡಿಲ್ಲ. ನೇರ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ ಎಂದಿದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗಬೇಕು ಎಂಬುದು ಹೈಕಮಾಂಡ್ ನಿರ್ಧರಿಸಲಿದೆ. ನನ್ನ ತಂಗಿ ಗಂಡ ಶರತ್ ಚಂದ್ರ ಸ್ಪರ್ಧೆ ಮಾಡುತ್ತಾರೆ ಎಂಬುದು ಸತ್ಯಕ್ಕೆ ದೂರವಾದುದು ಎಂದು ತಿಳಿಸಿದ್ದಾರೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ