ನಾನು ಯಾವತ್ತೂ ಡಿನೋಟಿಫಿಕೇಶನ್ ಮಾಡಿಯೇ ಇಲ್ಲ. ಅಂದ ಮೇಲೆ ನನ್ನ ವಿರುದ್ಧ ಡಿನೋಟಿಫಿಕೇಶನ್ ಆರೋಪ ಎಲ್ಲಿಂದ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಓಬಿಸಿ ಮೋರ್ಚಾದ ರಾಜ್ಯಾಧ್ಯಕ್ಷ ಬಿ.ಜಿ.ಪುಟ್ಟಸ್ವಾಮಿ ನನ್ನ ವಿರುದ್ಧ ಡಿನೋಟಿಫಿಕೇಶನ್ ಆರೋಪ ಮಾಡಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ತಿಳಿಸಿದ್ದಾರೆ. ಪುಟ್ಟಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವ ಬಗ್ಗೆ ಹಿರಿಯ ವಕೀಲರೊಂದಿಗೆ ಚರ್ಚೆ ನಡೆಸಿದ್ದೇನೆ. ಶೀಘ್ರದಲ್ಲಿ