ಚಾಮರಾಜನಗರ ( ಆ.08): ನೆರೆಯ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಗಡಿ ಭಾಗದ ಎಂಟು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಗಡಿಭಾಗದ ಚೆಕ್ಪೋಸ್ಟ್ ಗಳಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಕೇರಳ ಹಾಗೂ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಜಿಲ್ಲೆಯ ಮೂಲೆಹೊಳೆ, ಕೆಕ್ಕನಹಳ್ಳ, ಪಾಲಾರ್, ಪುಣಜನೂರು, ಅರ್ಧನಾರೀಪುರ, ನಾಲಾರೋಡ್ ಈ ಆರು ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ.