ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವ ಪ್ರಯತ್ನಕ್ಕೆ ಮುಂದಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ ಹಿರಿಯ ಪೊಲೀಸ್ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಸೂಚಿಸಿದರು. ಸಿಎಂ ಮೌಖಿಕವಾಗಿ ಪೊಲೀಸರಿಗೆ