ಈಗಾಗಲೇ ಮುಖ್ಯಮಂತ್ರಿಯವರು ಶಾಲೆ ಕಾಲೇಜು ರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಉಳಿದ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ಆರಂಭವಾದರೂ ದ.ಕ. ಸೇರಿದಂತೆ ಕೋವಿಡ್ ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು. ದ.ಕ. ಜಿಲ್ಲಾಸ್ಪತ್ರೆಯಾದ ವೆನ್ಲಾಕ್ನಲ್ಲಿ 32 ಬೆಡ್ಗಳ ಹೈಟೆಕ್ ಐಸಿಯು ಸಿದ್ಧಗೊಂಡಿದ್ದು, ಜಿಲ್ಲೆಗೆ ಗುರುವಾರ ಭೇಟಿ ನೀಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಲಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.