ಹಿಂದಿ ಭಾಷೆ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ.ಕರ್ನಾಟಕದಲ್ಲಿ ಎಂದಿಗೂ ಹಿಂದಿ ಹೇರಿಕೆ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ‘ಹಿಂದಿ ಹೇರಿಕೆ ಗುಲಾಮಗಿರಿಯ ಹೆಗ್ಗುರುತು’ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಅಮಿತ್ ಶಾ ಅವರು ಹಿಂದಿ ಹೇರುವಂತೆ ಅಥವಾ ಹಿಂದಿಯನ್ನು ಕಡ್ಡಾಯ ಮಾಡುವಂತೆ ಎಲ್ಲೂ ಹೇಳಿಲ್ಲ.ಅವರ ಮಾತನ್ನು ಅನಗತ್ಯವಾಗಿ ಕೆಲವರು ತಪ್ಪಾಗಿ ಅರ್ಥೈಸಿ