ಶೋಷಿತ ಸಮುದಾಯಗಳ ಮಹಾಸಂಸ್ಥಾನ ಆಗಬೇಕು ಎನ್ನುವ ಮಹಾ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ ಇದು ಕೇವಲ ಒಂದು ಜಾತಿ-ಸಮಾಜದ ಮಠ ಅಲ್ಲ. ಸರ್ವ ಶೋಷಿತ ಸಮಾಜಗಳಿಗೆ ಸೇರಿದ ಮಹಾ ಸಂಸ್ಥಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ರು. ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಸಿದ್ದರಾಮಯ್ಯ ಶೋಷಿತ ಸಮುದಾಯಗಳಿಗೆ ಧ್ವನಿ ಆಗುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯವನ್ನು ಒಟ್ಟಾಗಿಸಿ ಕಾಗಿನೆಲೆ