ಬೆಂಗಳೂರಿನ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇವತ್ತು ವಾಲ್ಮೀಕಿ ಜಯಂತಿಯ ಶುಭ ಸಂದರ್ಭದಲ್ಲಿ 8 ಜನ ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡುತ್ತಿದ್ದೇವೆ. ಎಲ್ಲರೂ ಕೂಡ ಅವರಂತೆ ಜೀವನದಲ್ಲಿ ಸಾಧನೆ ಪ್ರಯತ್ನ ಮಾಡಲಿ. ಅವರ ಜೀವನ ಎಲ್ಲರಿಗೂ ದಾರಿದೀಪವಾಗಲಿ ಎಂದು ಆಶಿಸುತ್ತೇನೆ ಎಂದರು.ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಕೇಂದ್ರ ಬರ ಅಧ್ಯಯನ ತಂಡ ಅಧ್ಯಯನ ಮಾಡಿ ವಾಸ್ತವಿಕತೆಯ