ಶಿವಮೊಗ್ಗದ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ವಿಮಾನ ನಿಲ್ದಾಣಕ್ಕೆ ಯಡೊಯೂರಪ್ಪ ಹೆಸರಿಡಲಾಗುವುದು ಎಂದು ಘೋಷಿಸಿದ್ದರು. ಯಡಿಯೂರಪ್ಪ ಅವರು ಸಿಎಂ ಗೆ ಪತ್ರ ಬರೆದು ವಿಮಾನ ನಿಲ್ದಾಣಕ್ಕೆ ಬೇರೆ ಮಹನೀಯರ ಹೆಸರನ್ನು ಇಡಿ. ನನ್ನ ಹೆಸರು