ಬೆಂಗಳೂರು : ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಅಹೋರಾತ್ರಿ ಹೋರಾಟ ನಡೆಸುತ್ತಿರುವ ಬಿಜೆಪಿ ಇಂದು ಸಿಎಂ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದು, ಆದರೆ ನೀವು ಸಿಎಂ ಕಚೇರಿಗೆ ಮುತ್ತಿಗೆ ಹಾಕುವ ಅವಶ್ಯಕತೆಯಿಲ್ಲ ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಜಿಂದಾಲ್ ಗೆ ಭೂಮಿ ಪರಭಾರೆ, ರೈತರ ಸಾಲಮನ್ನಾ, ಬರ ನಿರ್ವಹಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ಕಳೆದ 3 ದಿನಗಳಿಂದ ಅಹೋರಾತ್ರಿ ಹೋರಾಟ ನಡೆಸುತ್ತಿದ್ದು,