ವಿಧಾನಸೌಧದ ಬಳಿ ಜಪ್ತಿಯಾಗಿದ್ದ 1.97 ಕೋಟಿ ಹಣದ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಉತ್ತರ ನೀಡಬೇಕಾದ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣದ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು. ಆಗ ಸತ್ಯಾಂಶ ಹೊರಬರಲಿದ್ದು, ಯಾರ ಬಳಿ ಸಂಪೂರ್ಣ ಮಾಹಿತಿ ಇತ್ತು ಎನ್ನುವುದು ರಾಜ್ಯದ ಜನತೆಗೆ ಗೊತ್ತಾಗಲಿದೆ ಎಂದು ಹೇಳಿದರು. ನನ್ನ ವಿರುದ್ಧ ಕುಮಾರಸ್ವಾಮಿ