ಮೈಸೂರು : ನನಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಆಫರ್ಗಳು ಬರಲಿಲ್ಲ. ಸಚಿವ ನಾರಾಯಣ ಗೌಡ ಅವರ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ನನಗೆ ಆಫರ್ ಬರಲಿಲ್ಲ ಎಂದು ಅವರು ಹೇಳಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಒಳ್ಳೆಯ ಕೆಲಸ ಮಾಡಿ ಎಂದು ಜವಾಬ್ದಾರಿ ಕೊಟ್ಟಿದ್ದಾರೆ. ಆ ಕೆಲಸವನ್ನು ಮಾಡುತ್ತಿದ್ದೇನೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟನೆ ನೀಡಿದರು.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಒಂದು ತಿಂಗಳಿನಿಂದ ಬರದಿರುವುದಕ್ಕೆ ಚುನಾವಣೆ ಕಾರಣವಲ್ಲ. ಇಲಾಖೆಯ ಬೇರೆ