ಕಾಫಿನಾಡು ಚಿಕ್ಕಮಗಳೂರಿನಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕಮಾಲ್ ಮಾಡಿದ್ದಾರೆ.. ಕೊಪ್ಪದ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಿ ಬಿಜೆಪಿ ಅಭ್ಯರ್ಥಿ ಪರ ಮತಬೇಟೆ ನಡೆಸಿದ್ದಾರೆ.. ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ನನ್ನ ಹೃದಯದಿಂದ ನಿಮಗೆ ಮನವಿ ಮಾಡುತ್ತಿದ್ದೇನೆ.. ನಾನು ಶ್ರೀರಾಮನ ಜನ್ಮಭೂಮಿ ಉತ್ತರ ಪ್ರದೇಶದಿಂದ ಇಲ್ಲಿಗೆ ಬಂದಿದ್ದೇನೆ.. ಸಾವಿರಾರು ವರ್ಷಗಳಿಂದ ಕರ್ನಾಟಕ ಹಾಗೂ ಉತ್ತರ ಪ್ರದೇಶಕ್ಕೆ ಅವಿನಾಭಾವ ಸಂಬಂಧವಿದೆ.. ಒಂದೇ ಭಾರತ ಶ್ರೇಷ್ಠ ಭಾರತ ನಮ್ಮ ಕಲ್ಪನೆ ಎಂದು ತಿಳಿಸಿದ್ರು..