ಯಾವುದೇ ಕಾರಣಕ್ಕೂ ನನ್ನನ್ನು ಬಿಜೆಪಿ ಪಕ್ಷದಿಂದ ಹೊರ ಹಾಕಲ್ಲ. ನನಗೆ ನೋಟಿಸ್ ನೀಡಲು ಸಹ ಯಾರಿಂದಲೂ ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಹಿರಂಗವಾಗಿ ಸವಾಲ್ ಎಸೆದಿದ್ದಾರೆ. ಕಲಬುರ್ಗಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಮಾಜಿ ಮೇಯರ್ ವೆಂಕಟೇಶ ಮೂರ್ತಿ ಅವರನ್ನು ಬಿಜೆಪಿ ಪಾಳಯದಿಂದ ಅಮಾನತು ಮಾಡಿರುವ ಕುರಿತು ನನಗೆ ಮಾಹಿತಿ ಇಲ್ಲ. ಈ ಕುರಿತು