ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು, ಅಧಿಕಾರದ ಗದ್ದುಗೆ ಹಿಡಿಯಲೇ ಬೇಕು ಎಂದು ಪಣ ತೊಟ್ಟಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು. ದೇಶಕ್ಕೆ ಪ್ರಾದೇಶಿಕ ಪಕ್ಷಗಳ ಅವಶ್ಯಕತೆ ಇದೆ. ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯಕ್ಕೆ