ಶಿವಮೊಗ್ಗ : 2023ರ ವಿಧಾನಸಭಾ ಚುನಾವಣೆಯಲ್ಲಿ ದೇವರ ಆಶೀರ್ವಾದ ಜೆಡಿಎಸ್ ಪಕ್ಷದ ಮೇಲಿದೆ. ಹೀಗಾಗಿ ಈ ಬಾರಿ ನನ್ನ ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ನಡೆದ ಜೆಡಿಎಸ್ ಚುನಾವಣಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮದಲ್ಲಿ ಪ್ರತಿನಿತ್ಯ ಒಂದೊಂದು ಸರ್ವೆ ವರದಿ ಬರುತ್ತಿದೆ. ಈ ಬಾರಿ ಜೆಡಿಎಸ್ 30 ರಿಂದ 35