ಶಿವಮೊಗ್ಗ : ಬಿಜೆಪಿಯಾಗಲಿ ಅಥವಾ ನರೇಂದ್ರ ಮೋದಿಯವರು ಹಾಗೂ ಯಾರೇ ಅಗಲಿ ನನ್ನನ್ನು ಸೈಡ್ ಲೈನ್ ಮಾಡಿಲ್ಲ. ನಾನು ಮತ್ತೆ ಮತ್ತೆ ಬಹಳ ಸ್ಪಷ್ಟ ಮಾಡಿ ಹೇಳುತ್ತೇನೆ, ನಾನು ಸ್ವಇಚ್ಛೆಯಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಯಾರು ಒತ್ತಡ ತಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೊಂದಲ ತರುವಂತಹ ಪ್ರಯತ್ನವನ್ನು ಯಾರು ಮಾಡಬೇಡಿ. ಎಲ್ಲರೂ ಒಗ್ಗಟ್ಟಾಗಿ ಪಕ್ಷ ಸಂಘಟಿಸೋಣ. ನಮ್ಮೆಲ್ಲರ ಅದೃಷ್ಟಕ್ಕೆ