ಮೇಕೆದಾಟು ನಮ್ಮ ಯೋಜನೆ. ಇದರಿಂದ ತಮಿಳುನಾಡಿಗೂ ಅನುಕೂಲವಾಗುತ್ತದೆ. ಸಮುದ್ರಕ್ಕೆ ಹೋಗುವ ನೀರು ತಡೆದು ಅದನ್ನು ಕಾವೇರಿ ಭಾಗದ ಜನರ ಬಳಕೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಹೇಳಿದರು.ಈ ಕುರಿತು ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ..ಮೇಕೆದಾಟು ಯೋಜನೆ ಆಗ್ರಹಿಸಿ ನಾವು ಪಾದಯಾತ್ರೆ ಮಾಡಿದ ನಂತರ ರಾಜ್ಯ ಬಜೆಟ್ ನಲ್ಲಿ 1 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿತ್ತು.