ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ