ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬಸ್ಗಳನ್ನು ಓಡಿಸಲು ಸೂಚಿಸಲಾಗಿದೆ. ಸಂಸ್ಥೆಯ ಅಧಿಕಾರಿಗಳೇಖುದ್ದು ಸ್ಥಳಗಳಿಗೆ ಭೇಟಿ ಕೊಟ್ಟು ಈ ವಿಚಾರದಲ್ಲಿಪರಿಶೀಲನೆ ನಡೆಸಿ ಸೂಕ್ತವಾಗಿ ಸ್ಪಂದಿಸುತ್ತಾರೆ ಎಂದುಕೆಎಸ್ಆರ್ಟಿಸಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ.ಸಿ ಕಳಸದ್ ತಿಳಿಸಿದರು.ಪರಿಷತ್ ಚುನಾವಣೆ ಹಿನ್ನೆಲೆ ಸಿದ್ಧತೆಗಳ ಪರಿಶೀಲನೆಗೆ ಆಗಮಿಸಿದ್ದ ಅವರು ಜಿಲ್ಲಾ ಕೇಂದ್ರರಾಮನಗರದ ಬಸ್ ನಿಲ್ದಾಣ, ವಿಭಾಗೀಯ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಬಸ್ಗಳ ಸೌಕರ್ಯಸಿಗುತ್ತಿಲ್ಲ, ಜಿಲ್ಲೆಯಲ್ಲಿ 3500 ಪಾಸ್ ವಿತರಿಸಲಾಗಿದೆ. ಆದರೆ 40 ಬಸ್ಗಳು ಮಾತ್ರ ಸಂಚರಿಸುತ್ತವೆ. ಹೀಗಾಗಿ ತಮಗೆ ಅನಾನುಕೂಲವಾ ಗುತ್ತಿದೆಎಂಬ ಕಾರಣಕ್ಕೆ ಪ್ರತಿಭಟನೆಗಳು ನಡೆಯುತ್ತಿವೆ